ಅಂತಿಮ ಪದವಿ ಪರೀಕ್ಷೆ ನಡೆಸಲೇ ಬೇಕು – ಸುಪ್ರಿಂ ಕೋರ್ಟ್‌

ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸದೆ ಪದವಿ ನೀಡಲು ಸಾಧ್ಯವಿಲ್ಲ ಎಂಬ ಯುಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಪುನರ್‌ ಉಚ್ಚರಿಸಿದೆ. ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ಅಂತಿಮ ವರ್ಷದ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರಗಳಿಗೆ ಸೂಚನೆಯನ್ನು ನೀಡಿದೆ.
ಅಂತಿಮ ವರ್ಷದ ಪರೀಕ್ಷೆಗಳ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ತೀರ್ಪು ನೀಡಿರೋ ನ್ಯಾ.ಅಶೋಕ್‌ ಭೂಷಣ್‌ ನೇತೃತ್ವದ ತ್ರಿಸದಸ್ಯ ಪೀಠ ಅಂತಿಮ ಪರ್ಷದ ಪದವಿ ಪರೀಕ್ಷೆಗಳು ಕಡ್ಡಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಸೆಪ್ಟೆಂಬರ್‌ ೩೦ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಯುಜಿಸಿ ಸೂಚನೆ ನೀಡಿದೆ. ಆ ವೇಳೆಗೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಅಂದ್ರೆ ರಾಜ್ಯ ಸರ್ಕಾರಗಳು ಮತ್ತು ವಿಶ್ವವಿದ್ಯಾನಿಲಯಗಳು ಯುಜಿಸಿಗೆ ಮನಿವಿ ಮಾಡಿಕೊಳ್ಳಬಹುದು. ಆದರೆ ಪರೀಕ್ಷೆ ನಡೆಸುವುದೇ ಬೇಡ ಎನ್ನುವುದು ಸಮಂಜಸವಲ್ಲ ಎಂದು ಹೇಳಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top