ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಂದೂಡಿಕೆ.. 15 ದಿನಗಳ ಕಾಲ ಹಳ್ಳಿಗಳಿಗೆ ಹೋಗಬೇಡಿ

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಇಂದು ಸಿಎಂ ಯಡಿಯೂರಪ್ಪ ಮಾಧ್ಯಮಗಳಿಗೆ, ಮಾರ್ಚ್ 27 ರಿಂದ ನಡೆಯಬೇಕಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಮುದೂಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸೋಂಕು ತಗುಲಿ, ಅದು ಉಳಿದವರಿಗೂ ತಗುಲುವ ಸಾಧ್ಯತೆಗಳಿರುವುದರಿಂದಾಗಿ ತಜ್ಞರ ಜೊತೆ ಚರ್ಚೆ ನಡೆಸಿ, ಸಿಎಂ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸದ್ಯದ ಮಟ್ಟಿಗೆ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಇದೇ ವೇಳೆ, ನಗರಗಳಲ್ಲಿ ಇರುವ ಜನರಿಗೆ ಮನವಿ ಮಾಡಿಕೊಂಡಿದ್ದು, 15 ದಿನಗಳ ಕಾಲ ಯಾರು ತಮ್ಮ ಹಳ್ಳಿಗಳಿಗೆ ಹೋಗಬೇಡಿ, ನೀವಿರುವ ನಗರಗಳಲ್ಲೇ ಇದ್ದು ವೈರಸ್ ಹಳ್ಳಿಗಳಲ್ಲಿ ಹರಡುವುದನ್ನು ತಡೆಗಟ್ಟೋಣ ಹಾಗಾಗಿ 15ದಿನಗಳ ಕಾಲ ತಮ್ಮ ತಮ್ಮ ಹಳ್ಳಿಗಳಿಗೆ ಹೋಗದೇ ನೀವಿರುವ ನಗರಗಳಲ್ಲೇ ವಾಸವಾಗಿರಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top