ಒಡೆಯ ಗೆಲ್ಲಿಸಿದ್ದಕ್ಕೆ ಧನ್ಯವಾದ ಹೇಳಿದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌..!

ಕಳೆದ ವಾರ ರಿಲೀಸ್‌ ಆದ ಒಡೆಯ ಸಿನಿಮಾ ಭರ್ಜರಿಯಾಗಿ ಪ್ರದರ್ಶನ ಕಾಣ್ತಾ ಇದ್ದು, ಈ ಮೂಲಕ ಒಂದೇ ವರ್ಷದಲ್ಲಿ ಮೂರು ಬ್ಲಾಕ್‌ ಬಸ್ಟರ್‌ ಸಿನಿಮಾ ನೀಡಿದ ಖ್ಯಾತಿ ಪಡೆದಿದ್ದಾರೆ. ಬಾಕ್ಸಾಫಿಸ್‌ ಸುಲ್ತಾನ್‌ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಇನ್ನು ಒಡೆಯ ರಿಲೀಸ್‌ ಆದ ಮೊದಲನೇ ದಿನ 3ಕೋಟಿ ಕಲೆಕ್ಷನ್‌ ಮಾಡಿತ್ತು ಗಾಂಧಿನಗರದ ಲೆಕ್ಕಾಚಾರ ಹೇಳ್ತಿದ್ರೆ, ಇನ್ನು ಶನಿವಾರ ಮತ್ತು ಭಾನುವಾರ 4 ಮತ್ತು 6ಕೋಟಿ ಕಲೆಕ್ಷನ್‌ ಮಾಡಿದೆ ಅಂತಾನೂ ಹೇಳಲಾಗ್ತಾ ಇದೆ, ಬಿಡುಗಡೆ ದಿನ ಅಷ್ಟೇನೂ ದೊಡ್ಡ ಓಪನಿಂಗ್‌ ಸಿಗದ ಒಡೆಯ ಸಿನಿಮಾಗೆ ದಿನದಿಂದ ದಿನಕ್ಕೆ ಜನರನ್ನು ಥಿಯೇಟರ್‌ ಕಡೆಗೆ ಸೆಳೆಯಲು ಸಕ್ಸಸ್‌ ಆಗಿದೆ. ಈ ನಡುವೆ ಚಿತ್ರ ಭರ್ಜರಿ ರೆಸ್ಪಾನ್ಸ್‌ ಪಡೆದ ಹಿನ್ನೆಲೆಯಲ್ಲಿ ದಾಸ ದರ್ಶನ್‌ ತಮ್ಮ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತು ಸಿನಿರಸಿಕರಿಗೆ ಧನ್ಯವಾದ ತಿಳಿಸಿದ್ದಾರೆ.

`ಕಳೆದ ವರ್ಷ ಯಾವುದೇ ಚಿತ್ರ ಬಿಡುಗಡೆಯಾಗದಿದ್ದರೂ ತಾಳ್ಮೆಯಿಂದ ಕಾದು ಈ ವರ್ಷ ಬಿಡುಗಡೆಯಾದ 3 ಚಿತ್ರಗಳಿಗೂ ನೀವು ತೋರಿರುವ ಪ್ರೀತಿ-ಅಭಿಮಾನಕ್ಕೆ ಧನ್ಯವಾದಗಳು‬

‪ಮನೆಮಂದಿಯೆಲ್ಲರ ಜೊತೆಗೆ ಬಂದು ಆಶೀರ್ವದಿಸುತ್ತಿರುವ ಪ್ರೇಕ್ಷಕ ಸಮೂಹಕ್ಕೆ, ಶುಭ ಕೋರಿದ ನನ್ನ ಎಲ್ಲಾ ಸೆಲೆಬ್ರಿಟಿಗಳು, ಸ್ನೇಹಿತರಿಗೂ ಸದಾ ಚಿರಋಣಿ😊’

ನಿಮ್ಮ ದಾಸ ದರ್ಶನ್

ಎಂದು ಬರೆದುಕೊಳ್ಳುವ ಮೂಲಕ ಸಿನಿಮಾವನ್ನು ಗೆಲ್ಲಿಸಲು ಸಹರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top