
ಕೊರೋನಾ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಜಕೀಯ ವ್ಯಕ್ತಿಗಳಲ್ಲೂ ಕೊರೋನಾ ಸೋಂಕು ಕಾಣಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಇದೀಗ ಕಾಂಗ್ರೆಸ್ನ ಹಿರಿಯ ಮತ್ತು ಶಾಸಕ ಎಚ್.ಕೆ ಪಾಟೀಲ್ಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.
ಬೆಂಗಳೂರಿನ ಅವರ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದು, ಇತ್ತಿಚೆಗೆ ಎಚ್.ಕೆ ಪಾಟೀಲ್ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು, ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರೋ ಪಾಟೀಲ್ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸಕ್ಕೆ ಹೋಗಿದ್ದರು ಇದರಿಂದಾಗಿ ಸೋಂಕು ಬಂದಿರಬಹುದು ಎಂದು ಶಂಕಿಸಲಾಗಿದೆ.
ತಮಗೆ ಪಾಸಿಟಿವ್ ಬಂದಿರುವ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದು, ತಮ್ಮ ಸಂಪರ್ಕದಲ್ಲಿ ಇದ್ದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.