ಕುಡಿದ ಮತ್ತಿನಲ್ಲಿ ಪೊಲೀಸರ ಜೊತೆ ಕಿರಿಕ್‌ ಮಾಡಿಕೊಂಡ ರಾಜಾಹುಲಿ ಸ್ನೇಹಿತ..

ಕುಡಿದ ಮತ್ತಿನಲ್ಲಿ ಪೊಲೀಸರ ಜೊತೆ ಸ್ಯಾಂಡಲ್‌ವುಡ್‌ ನಟ ಕಿರಿಕ್‌ ಮಾಡಿಕೊಂಡಿರೋ ಘಟನೆ ನಡೆದಿದೆ. ನಟ ಹರ್ಷ ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್‌ ಮುಂಭಾಗದಲ್ಲಿ ಸ್ನೇಹಿತರ ಜೊತೆ ಸೇರಿ ಕುಡಿಯುತ್ತಿದ್ದರು. ಅಪಾರ್ಟ್‌ಮೆಂಟ್‌ ಮುಂದೆ ಕುಡಿಯುತ್ತಿರುವ ವಿಷಯ ತಿಳಿದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಯಾಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರ ಜೊತೆ ಕಿರಿಕ್‌ ಮಾಡಿಕೊಂಡಿದ್ದಾರೆ.

ʻನಮ್ಮನ್ನು ಏನು ಮಾಡಿಕೊಳ್ಳಲು ಸಾಧ್ಯವಿಲ್ಲ, ನಮಗೆ ದೊಡ್ಡ ವ್ಯಕ್ತಿಗಳ ಪರಿಚಯವಿದೆ ನೀವು ಏನು ಬೇಕಾದರು ಮಾಡಿಕೊಳ್ಳಿʼ ಎಂದು ಹೇಳಿದ್ದಾರೆ. ಸದ್ಯ ಕಿರಿಕ್‌ ಮಾಡಿಕೊಂಡ ಹರ್ಷ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ಬಿಸಿ ಮುಟ್ಟಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top