
ಕೇಂದ್ರ ಸರ್ಕಾರ ಶಾಲೆ ಪ್ರಾರಂಭಕ್ಕೆ ಅನುಮತಿ ಕೊಟ್ಟರೂ ಸದ್ಯಕ್ಕೆ ನಾವು ಶಾಲೆಯನ್ನು ಪ್ರಾರಂಭ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆಗೆ ಮಕ್ಕಳನ್ನು ಕಳುಹಿಸುವ ವಿಚಾರದಲ್ಲಿ ಪೋಷಕರಿಗೆ ಭಯ ಇದ್ದು ಅವರ ಆತಂಕ ನಿವಾರಣೆ ಮಾಡುವ ಜವಾಬ್ದಾರಿ ನನ್ನದಾಗಿದೆ. ನಾನು ರಾಜ್ಯದ ಮಕ್ಕಳ ಪೋಷಕನಾಗಿ ನನಗೂ ಜವಬ್ದಾರಿ ಇದೆ. ಪೋಷಕರ ಕಾಳಜಿ ಮತ್ತು ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಚಂದನವಾಹಿನಿಯಲ್ಲಿ 8,9 ಮತ್ತು 10ನೇ ತರಗತಿ ಪಾಠ ಮಾಡುತ್ತಿದ್ದೇವೆ. ಕೆಲ ಶಾಲೆಯಲ್ಲಿ ಆನ್ಲೈನ್ ಕ್ಲಾಸ್ ಮಾಡುತ್ತಿವೆ. ಉಳಿದ 1 ರಿಂದ 7 ನೇತ ರಗತಿ ಮಕ್ಕಳಿಗಾಗಿ ಖಾಸಗಿ ವಾಹಿನಿಗಳಲ್ಲಿ ಪಾಠ ಶುರುಮಾಡಲು ತೀರ್ಮಾನಿಸಿದ್ದೇವೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭ ಮಾಡುವುದಿಲ್ಲ, ಕೇಂದ್ರ ಸರ್ಕಾರ ಅನುಮತಿ ನೀಡಿದರು ನಾವು ಸದ್ಯಕ್ಕೆ ಪ್ರಾರಂಭ ಮಾಡುವುದಿಲ್ಲ ತಕ್ಷಣವೇ ಶಾಲೆ ಪ್ರಾರಂಭ ಮಾಡುವ ಧಾವಂತ ನಮಗೆ ಇಲ್ಲ.ಪೋಷಕರು ಮತ್ತು ತಜ್ಞರ ,ಶಿಕ್ಷಕರ ಜೊತೆ ಸಮಾಲೋಚನೆ ತೀರ್ಮಾನ ತೆಗೆದುಕೊಳ್ಳುತ್ತೇವೆ.ಪೋಷಕರು ಆತಂಕ ಪಡುವುದು ಬೇಡ , ಆತುರದಲ್ಲಿ ಶಾಲೆ ಪ್ರಾರಂಭ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.