ಕೊರೋನಾದಿಂದ ಗುಣಮುಖರಾಗಿದ್ದ ಡಿಕೆಶಿಗೆ ಮತ್ತೆ ಜ್ವರ ಆಸ್ಪತ್ರೆಗೆ ದಾಖಲು..

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ವಾಪಾಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಮತ್ತೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್‌ ೨೫ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಧೃಢಪಟ್ಟಿತ್ತು. ಇದರಿಂದಾಗಿ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇತ್ತಿಚೆಗೆ ಆಸ್ಪತ್ರೆಯಿಂದ ಹೊರಬಂದಿದ್ದ ಡಿಕೆಶಿಗೆ ಬುಧವಾರ ಮತ್ತೆ ಜ್ವರ ಕಾಣಿಸಿಕೊಂಡಿದ್ದು. ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೋನಾ ಸೋಂಕು ಗುಣಮುಖವಾದ ಬಳಿಕ ಜ್ವರ ಏಕೆ ಬಂತು ಎಂಬ ಬಗ್ಗೆ ಪರಿಶೀಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಜ್ವರ ಮಾತ್ರ ಕಾಣಿಸಿಕೊಂಡಿದ್ದು ಬೇರೆ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top