ಕೊರೋನಾ ಸೋಂಕಿನಿಂದ ಗುಣಮುಖರಾದ ಜನಾರ್ಧನ ರೆಡ್ಡಿ..

ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಾಲಿ ಜನಾರ್ಧನ ರೆಡ್ಡಿ ಗುಣಮುಖರಾಗಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದು ತಮ್ಮ ಅಭಿಮಾನಿಗಳಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆತ್ಮೀಯರೆ.

ನಾನು ಕಳೆದ ವಾರ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ತಮ್ಮೆಲ್ಲರ ಶುಭಹಾರೈಕೆ ಹಾಗೂ ಆ ಭಗವಂತನ ಆಶೀರ್ವಾದಿಂದ ಈಗ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಖಾಸಗಿ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯರ ತಂಡ ಹಾಗೂ ವೈದ್ಯಕೀಯ ಸಿಬ್ಬಂದಿ ನೀಡಿದ ಅತ್ಯುತ್ತಮ ಚಿಕಿತ್ಸೆ ಹಾಗೂ ಅವರ ಕಾಳಜಿಯಿಂದ ನಾನು ಇಂದು ಸಂಪೂರ್ಣ ಗುಣಮುಖನಾಗಿದ್ದೇನೆ. ನನಗೆ ಉತ್ತಮ ಚಿಕಿತ್ಸೆ ನೀಡಿದ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ನಾನು ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ, ನಾನು ಆದಷ್ಟು ಬೇಗ ಗುಣಮುಖನಾಗಲಿ ಎಂದು ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲಾ ನನ್ನ ಬಂಧುಗಳಿಗೆ ಸ್ನೇಹಿತರಿಗೆ, ಹಿತೈಷಿಗಳಿಗೆ ಹಾಗೂ ಅಭಿಮಾನಿಗಳಿಗೆಲ್ಲರಿಗೂ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

-ಗಾಲಿ ಜನಾರ್ಧನ ರೆಡ್ಡಿ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top