ಗ್ರಾಮ ಪಂಚಾಯಿತಿ ಚುನಾವಣೆಗೆ ಎಸ್‌ಎಸ್‌ಎಲ್‌ಸಿ ಓದಿರಲೇ ಬೇಕಾ..?

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಪೂರೈಸಿರಬೇಕು ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಚುನಾವಣಾ ಆಯೋಜ ತಿಳಿಸಿದೆ.

ನಕಲಿ ರಾಜ್ಯಪತ್ರ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇದ್ದು, ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್‌ ೫ ಮತ್ತು ೯ ರಂದು ನಡೆಯಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರವೊಂದು ಹರಿದಾಡುತ್ತಿದ್ದು, ಇದೀಗ ಚುನಾವಣಾ ಆಯೋಗ ಚುನಾವಣಾ ದಿನಾಂಕ ಖಚಿತ ಪಡಿಸಿಲ್ಲ ಎಂದು ಆಯೋಗಕ್ಕೆ ಸ್ಪಷ್ಟಪಡಿಸಿದೆ.

ಇನ್ನು ಕರ್ನಾಟಕದಲ್ಲಿ ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ಮತ್ತು ಪಾನ್‌ ಕಾರ್ಡ್‌ ಹೊಂದಿರ ಬೇಕು ಎಂಬುದು ಕೂಡ ಸುಳ್ಳು ಸುದ್ದಿ.ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿ ಎಸ್‌ಎಸ್‌ಎಲ್‌ಸಿ ವರೆಗೆ ವ್ಯಾಸಂಗ ಮಾಡಿರಬೇಕು ಮತ್ತು ಇಂತಿಷ್ಟೇ ಮಕ್ಕಳನ್ನು ಹೊಂದಿರಬೇಕು ಎಂಬ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ ಯಾರು ಈ ಸುದ್ದಿಗಳನ್ನು ನಂಬಬಾರದು ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top