ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್‌

ಲೋಕಲ್‌ ಎಲೆಕ್ಷನ್‌ಗೆ ಇದೀಗ ಮುಹೂರ್ತ ಫಿಕ್ಸ್‌ ಆಗಿದೆ, ಡಿಸೆಂಬರ್‌ 22ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಡಿಸೆಂಬರ್‌ 11ರಂದು ನಾಮ ಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಡಿಸೆಂಬರ್‌ 14ರಂದು ನಾಮಪತ್ರ ವಾಪಾಸ್‌ ಪಡೆಯಲು ಕೊನೆಯ ದಿನಾಂಕ, ಬೀದರ್‌ನಲ್ಲಿ ಇವಿಎಂ ಬಳಕೆಯಾಗಲಿದ್ದು, ಉಳಿದ ಜಿಲ್ಲೆಯಲ್ಲಿ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಯಲಿದೆ. ಡಿಸೆಂಬರ್‌ 30ರಂದು ಫಲಿತಾಂಶ ಪ್ರಕಟವಾಗಲಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top