ಜನಾರ್ದನ ರೆಡ್ಡಿಗೆ ಕೊರೋನಾ ಸೋಂಕು

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಕೊರೋನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ವಿಚಾರವಾಗಿ ಸಚಿವ ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ವಿಷಯ ತಿಳಿಸಿದ್ದು ತಮ್ಮ ಟ್ವೀಟರ್‍ನಲ್ಲಿ ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಸಚಿವ ಶ್ರೀರಾಮುಲು ಆಗಸ್ಟ್ 9ರಂದು ಕೊರೋನಾ ಸೋಂಕು ತಗುಲಿತ್ತು, ಕೂಡಲೇ ಆಸ್ಪತ್ರೆಗೆ ದಾಖಲಾಗಿ ಆಗಸ್ಟ್ 16ರಂದು ಡಿಸ್ಚಾರ್ಜ್ ಆಗಿದ್ದರು

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top