ನಾವು ತೆಗೆಯೋಲ್ಲ ರೈತರೇ ಸರ್ಕಾರವನ್ನು ತೆಗೆಯುತ್ತಾರೆ -ಡಿಕೆ ಶಿವಕುಮಾರ್‌

ಕಾಂಗ್ರೆಸ್‌ ನಿಮ್ಮ ಸರ್ಕಾರವನ್ನು ತೆಗೆಯುವುದಿಲ್ಲ, ರೈತರೇ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್‌ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಸ್‌ ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ಕೈ ನಾಯಕರು ಪ್ರತಿಭಟನಾ ಸಭೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಡಿಕೆಶಿ ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತರ ಪರವಾಗಿ ಇದ್ದೇನೆ ಎಂದಯ ಬೂಟಾಟಿಕೆ ಮಾಡುತ್ತಿದ್ದಾರೆ.

ಆದರೆ ರಾಜ್ಯದ ರೈತರು ನಿಮ್ಮ ಸರ್ಕಾರವನ್ನು ಕಿತ್ತು ಎಸೆಯುತ್ತಾರೆ. ರೈತ ವಿರೋಧಿ ಕಾನೂನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.


ರೈತರ ರಕ್ಷಣೆ ನಮ್ಮ ಹೊಣೆ.ಹೀಗಾಗಿ ಪ್ರತಿಭಟನೆ ಕರೆ ನೀಡಿದ್ದು ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲರಿಗೂ ವಂದನೆಗಳು ಎಂದು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top