ನಿಮ್ಮ ಕೈಲಿ ಪ್ಲಾಸ್ಟಿಕ್ ಕವರ್ ಇದ್ರೆ ಬಿಎಂಟಿಸಿ ಬಸ್ ಹತ್ತಂಗಿಲ್ಲ..!

ಪ್ಲಾಸ್ಟಿಕ್ ನಿಷೇಧವಾಗಿದ್ರು ಸಹ ಅದು ಅಷ್ಟಾಗಿ ಅನುಷ್ಠಾನಕ್ಕೆ ಬಂದಿಲ್ಲ, ಅಲ್ಲದೇ ಪ್ಲಾಸ್ಟಿಕ್ ಬಳಸಬೇಡಿ ಎಂದು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು ಅದು ಅಷ್ಟೊಂದು ಫಲಕಾರಿಯಾಗಿಲ್ಲ, ಇನ್ನು ಸಾರ್ವಜನಿಕರು ಕೂಡ ಅದಕ್ಕೆ ಸರಿಯಾಗಿ ಸ್ಪಂದನೆ ನೀಡದೇ ಇರುವುದು ಕೂಡ ಪ್ಲಾಸ್ಟಿಕ್ ನಿಷೇಧವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾಧ್ಯವಾಗಿಲ್ಲ, ಆದ್ರೆ ಈಗ ರಾಜ್ಯದ ಬಿಎಂಟಿಸಿ ಸಂಸ್ಥೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಹೌದು ಇನ್ನು ಮುಂದೆ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸುವವರು ಪ್ಲಾಸ್ಟಿಕ್ ಕವರ್, ವಸ್ತುಗಳನ್ನು ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಆದೇಶ ಹೊರಡಿಸಿದ್ದಾರೆ.

plastic ban in bmtc

ಪ್ಲಾಸ್ಟಿಕ್ ಅನ್ನು ನಿಷೇಧಿಸಿರುವ ಬಿಎಂಟಿಸಿ ಆಡಳಿತ ಮಂಡಳಿ ಪ್ಲಾಸ್ಟಿಕ್ ತರದಂತೆ ಪ್ರಯಾಣಿಕರಿಗೆ ಜಾಗೃತಿ ಮೂಡಿಸಲು ಚಾಲಕರಿಗೆ ಮತ್ತು ನಿರ್ವಾಹಕರಿಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುವವರು ಪ್ಲಾಸ್ಟಿಕ್ ಕವರುಗಳನ್ನು ತರುವುದನ್ನು ನಿಷೇಧಿಸಬೇಕೆಂದು ಮತ್ತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ಕವರುಗಳನ್ನು ಬಳಕೆಯನ್ನು ನಿಷೇಧಿಸಬೇಕು. ನಮ್ಮ ಬೆಂಗಳೂರು ನಗರ ಮತ್ತು ಸಂಸ್ಥೆಯನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಬೇಕು ಎಂದು ಶಿಖಾ ಹೇಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top