ನೀರು ಕೇಳುವ ನೆಪದಲ್ಲಿ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಪಾಪಿ

ಹೈದರಾಬಾದ್ ಪಶುವೈದ್ಯ ಮೇಲಿನ ಅತ್ಯಾಚಾರ ಸುದ್ದಿ ಇನ್ನು ಜನರಲ್ಲಿ ಬೆಂಕಿಯಂತೆ ಹಾಗೆ ಇರುವಾಗಲೇ, ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿರೋ ಅಮಾನವೀಯ ಘಟನೆ ಈಗ‌ ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಕಂಜಿರ್ ಪಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಲೋಟ ನೀರು ಕೊಡುವಂತೆ ಕೇಳಿ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿದ್ದು, ಮನೆಯಲ್ಲಿ ಅಪ್ರಾಪ್ತೆ ಯುವತಿಯೊಬ್ಬಳೇ ಇರುವುದನ್ನು ಕಂಡು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಸದ್ಯ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top