ಫೋಟೋ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ದೂರು ದಾಖಲಿಸಿದ ಸಾಧುಕೋಕಿಲ

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋಗಳನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ ಎಂದು ಹಾಸ್ಯ ನಟ ಸಾಧುಕೋಕಿಲ ಪೊಲೀಸರರಿಗೆ ದೂರು ನೀಡಿದ್ದಾರೆ.
ತಾವು ನಟಿಸಿರುವ ಅನೇಕ ಸಿನಿಮಾಗಳ ವಿಡಿಯೋವನ್ನು ಫೋಟೋ ಮಾಡಿಕೊಂಡು ಫೇಸ್‌ಬುಕ್‌ ಮತ್ತು ಇನ್ಸ್ಟಾಗ್ರಾಂನಲ್ಲಿ ನಕಲಿ ಖಾತೆ ಸೃಷ್ಟಿಸಿ ತಮಗಿಷ್ಟವಾದ ರೀತಿ ಪೋಸ್ಟ್‌ಗಳನ್ನು ಮಾಡುತ್ತಿದ್ದು, ಇದರಿಂದಾಗಿ ನಮ್ಮ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ಸಾಧುಕೋಕಿಲಾ ದೂರು ನೀಡಿದ್ದು, ಈ ವಿಚಾರವಾಗಿ ದಕ್ಷಣ ವಿಭಾಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ. ಇನ್ನು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿಮಾಡಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top