ಬಿಜೆಪಿ, ಕಾಂಗ್ರೆಸ್‌ಗೆ ಶಾಕ್‌ ಕೊಟ್ಟ ಸಂಸದೆ ಸುಮಲತಾ ಅಂಬರೀಶ್‌..!

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಸಂಸದೆ ಸುಮಲತಾ ಯಾರ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಇನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಎರಡು ಪಕ್ಷದವರು ನಮಗೆ ಬೆಂಬಲ ನೀಡಿ ಎಂದು ದುಂಬಾಲು ಬಿದ್ದಿದ್ದಾರೆ. ಇನ್ನು ಲೋಕಸಭಾ ಚುನಾವಣೆ ವೇಳೆ ಸುಮಲತಾ ಅವರಿಗೆ ಬಿಜೆಪಿ ಬಾಹ್ಯಬೆಂಬಲ ನೀಡಿದ್ರೆ ಕಾಂಗ್ರೆಸ್‌ ಕಾರ್ಯಕರ್ತರು ಸಹ ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ರು, ಹೀಗಾಗಿ ಸಂಕಷ್ಟಕ್ಕೆ ಸಿಲುಕಿದ್ದ ಸುಮಲತಾ ಅವರು ಇದುವರೆಗೂ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ರು.

ಆದ್ರೆ ಈಗ ಎರಡು ಪಕ್ಷದವರಿಗೂ ಸ್ಪಷ್ಟವಾದ ಸಂದೇಶವನ್ನು ತಿಳಿಸಿದ್ದಾರೆ ಸಂಸದೆ ಸುಮಲತಾ. ನಾನು ಯಾವ ಕಾರಣಕ್ಕೂ ಯಾರ ಪರವಾಗಿಯೂ ಪ್ರಚಾರಕ್ಕೆ ಬರಲ್ಲ ಎಂದಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಮತ್ತು ಬಿಜೆಪಿ ಎರಡು ಪಕ್ಷದವರಿಗೂ ಸುಮಲತಾ ಅವರನ್ನು ಕರೆತಂದು ಸುಲಭವಾಗಿ ಗೆಲ್ಲಬಹುದು ಅನ್ನೋ ಕನಸಿಗೆ ಈಗ ತಣ್ಣೀರು ಹಾಕಿದಂತಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top