ಬೆಳ್ಳಂ ಬೆಳಗ್ಗೆ ಡಿಕೆಶಿಗೆ ʻಸಿಬಿʼಐ ಶಾಕ್‌..

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಬೆಳ್ಳಂ ಬೆಳಗ್ಗೆ ಸಿಬಿಐ ಶಾಕ್‌ ನೀಡಿದೆ. ಸದಾಶಿವ ನಗರದ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಡಿಕೆಶಿ ಮನೆಯ ಮೇಲೆ ರೇಡ್‌ ಮಾಡಿದ್ದಾರೆ. ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸಂಬಂಧಿಸಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಡಿಕೆಶಿ ಸಹೋದರ ಡಿ.ಕೆ ಸುರೇಶ್‌ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಸುರೇಶ್‌ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top