
6 ಜನ ಕಾಮುಕರು 45 ವರ್ಷದ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತ ಮಹಿಳೆ ತನ್ನ ಸಂಬಂಧಿಯೊಂದಿಗೆ ಬೇರೊಬ್ಬ ವ್ಯಕ್ತಿಗೆ ಸಾಲವನ್ನುನೀಡಿ ವಾಪಾಸ್ ಬರುವ ವೇಳೆ, ರಸ್ತೆಯಲ್ಲಿ ಕಾಮುಕರು ಅಡ್ಡಹಾಕಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಅಲ್ಲದೇ ಮಹಿಳೆಯ ಸಂಬಂಧಿಗೆ ಹಲ್ಲೆ ಮಾಡಿದ್ದಾರೆ.
ನಂತರ ಒಬ್ಬ ವ್ಯಕ್ತಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದು ಅದನ್ನು ವಿಡಿಯೋ ಮಾಡಿದ್ದಾರೆ. ನಂತರ 5 ಜನ ಸೇರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸಂತ್ರಸ್ತೆ ಮಹಿಳೆ ಈ ವಿಚಾರವನ್ನು ತನ್ನ ಪತಿಯ ಬಳಿ ಹೇಳಿದ್ದು, ಆಕೆ ಪೊಲೀಸ್ ಠಾಣೆಗೆ ಬಂದು ದೂರ ನೀಡಿದ್ದಾಳೆ. ದೂರಿನ ಅನ್ವಯ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರ ಹುಡುಕಾಟದಲ್ಲಿ ತೊಡಗಿದ್ದಾರೆ.