ಮಾಧ್ಯಮಗಳಿಗೆ ಮನವಿ ಮಾಡಿಕೊಂಡ ಆ್ಯಂಕರ್‌ ಅನುಶ್ರೀ..

ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು, ಈ ಕುರಿತು ಅನುಶ್ರೀ ಸ್ಪಷ್ವನೆಯನ್ನು ನೀಡಿದ್ದಾರೆ. ಜೊತೆಗೆ ಮಾಧ್ಯಮಗಳಿಗೆ ಅನುಶ್ರೀ ಮನವಿಯನ್ನು ಮಾಡಿಕೊಂಡಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿರೋ ಅನುಶ್ರೀ ಗುರುವಾರ ಸಂಜೆ ನನಗೆ ಮಂಗಳೂರಿನ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ನೋಟಿಸ್‌ ಬಂದಿದ್ದು, ಇಂದು ಬೆಳಗ್ಗೆ 11ಗಂಟೆಗೆ ನಾನು ಮಂಗಳೂರಿಗೆ ತೆರಳಿ ಆ ವಿಚಾರಣೆಗೆ ಖುದ್ದಾಗಿ ಹಾಜರಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದು ಬರೀ ವಿಚಾರಣೆಯ ಅಷ್ಟೆ , ಮಾಧ್ಯಮಗಳಲ್ಲಿ ನಾನು ನಟಿಸಿದ ಚಿತ್ರವೊಂದನ್ನು ಬಳಸಿ ನನ್ನನ್ನು ಅಪರಾಧಿ ಎಂಬಂತೆ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ . ಮಾಧ್ಯಮ ಮಿತ್ರರಲ್ಲಿ ನನ್ನ ಕೋರಿಕೆ ಪ್ರಸ್ತುತ ಚರ್ಚೆಯಾಗುತ್ತಿರುವ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ, ವಿಚಾರಣೆಗೆ ಕರೆದ ಕೂಡಲೇ ನಾನು ಅಪರಾಧಿ ಎಂದಲ್ಲ ಎಂದು ನನಗೆ ತಿಳಿದಿದೆ ಎಂದಿದ್ದಾರೆ. ಪೊಲೀಸರಿಗೆ ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿ ಸಹಕರಿಸುತ್ತೇನೆ . ಮಾಧ್ಯಮಗಳು ಯಾವುದೇ ನಿಲುವನ್ನು ಕೊಳ್ಳದಿರಿ ಎಂದು ನನ್ನ ಕಳಕಳಿ ಮನವಿ. ಈಗಾಗಲೇ ಈ ವಿಚಾರವಾಗಿ ನನ್ನ ಕುಟುಂಬ ವರ್ಗಕ್ಕೆ ನೋವು ತಂದಿದೆ. ಮಾಧ್ಯಮದಲ್ಲಿ ಅತಿಯಾದ ಪ್ರಚಾರವು ಸತ್ಯವನ್ನು ದಾರಿ ತಪ್ಪಿಸುವುದಾಗಬಾರದು ಎನ್ನುವುದು ನನ್ನ ಕಾಳಜಿ. ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದವರು ಎಲ್ಲಾರು ಅಪರಾಧಿಗಳಲ್ಲ ಎನ್ನುವುದು ತಮಗೂ ತಿಳಿದಿದೆ. ಈ ವಿಚಾರ ಕುರಿತಂತೆ ಸಮತೋಲನದ ವರದಿಗಳನ್ನು ನೀಡುವಂತೆ ಕೋರುತ್ತೇನೆ ಎಂದು ಮಾಧ್ಯಮ ಮಿತ್ರರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಿಚಾರಣೆಯಾಗ ಬಳಿಕ ಮಾಧ್ಯಮಗಳಿಗೆ ನೀಡಬಹುದಾದ ಮಾಹಿತಿಯನ್ನು ನಾನು ನೀಡುತ್ತೇನೆ . ಮಾಧ್ಯಮ ಮಿತ್ರರು ಸತ್ಯಾಸತ್ಯತೆಗಳು ಹೊರಬರುವವರೆಗೆ ತಾಳ್ಮಿಯಿಂದ ಸಹಕರಿಸಬೇಕು ಎಂದು ಅನುಶ್ರೀ ಮನವಿ ಮಾಡಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top