ಮೊಬೈಲ್‌ ಜಾಸ್ತಿ ಬಳಸಬೇಡ ಅಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಮೊಬೈಲ್‌ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎಸ್‌.ಆರ್‌.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನಡೆದಿದ್ದು ನಿಕಾನ್‌ ಎಂಬ ೧೯ ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೊಬೈಲ್‌ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ನಿಕಾನ್‌ ದ್ವಿತೀಯ ಪಿಯುಸಿ ಓದುತ್ತಿದ್ದಳು. ಈ ವಿಚಾಋವಾಗಿ ಎಸ್‌ ಆರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top