ರಫೇಲ್ ಡೀಲ್ ಖಂಡಿಸಿ ಯೂತ್ ಕಾಂಗ್ರೆಸ್ ಪ್ರೊಟೆಸ್ಟ್

ಕೇಂದ್ರ ಸರ್ಕಾರದ ರಫೇಲ್ ಡೀಲ್ ವಿರುದ್ಧ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಐಟಿ ತನಿಖೆ ಖಂಡಿಸಿ ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.. ಕೇಂದ್ರದ ಬಿಜೆಪಿ ಸರ್ಕಾರ ಐಟಿ ಇಲಾಖೆಯನ್ನ ಅಸ್ತ್ರವನ್ನಾಗಿ ಬಳಸಿಕೊಂಡು ದಬ್ಬಾಳಿಕೆ ನಡೆಸುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ರು. ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಚೌಕಿದಾರ್ ಚೋರ್ ಹೈ ಎಂದು ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ರು ಬಸವನ ಗೌಡ ಬಾದಾರ್ಲಿ ಮೊಹಮ್ಮದ್ ನಲಪಾಡ್, ಶಿವಕುಮಾರ್ ಸೇರಿದಂತೆ ಹಲವು ಯೂತ್ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.. ಪ್ರತಿಭಟನಾ ನಿರತ ಕಾರ್ಯಕರ್ತರಿಂದ ಆದಾಯ ತೆರಿಗೆ ಇಲಾಖೆ ಮುತ್ತಿಗೆ ಹಾಕಲು ಮುಂದಾದರು.. ಈ ವೇಳೆ ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನ ದಾರಿ ಮಧ್ಯದಲ್ಲೇ ಪೊಲೀಸರು ಬಂಧಿಸಿದರು.
ಇನ್ನು ಸಚಿವ ಡಿ.ಕೆ. ಶಿವಕುಮಾರ್ ಐಟಿ ವಿಚಾರಣೆ ಸಂಬಂಧ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.. ಮೂವತ್ತಕ್ಕೂ ಹೆಚ್ಚು ಪೊಲೀಸರು ಹಾಗೂ 1 ಕೆ ಎಸ್ ಆರ್ ಪಿ ತುಕಡಿಯನ್ನ ಐಟಿ ಇಲಾಖೆ ಬಳಿ ನಿಯೋಜನೆ ಮಾಡಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top