ರಸ್ತೆ ಅಪಘಾತ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ತರೀಕೆರೆ ಶಾಸಕ..!

ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಶಾಸಕರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಲಿಂಗದಹಳ್ಳಿಯಿಂದ ಕೃಷ್ಣಾಪುರಕ್ಕೆ ಸಂಚರಿಸುವ ರಸ್ತೆ ಮಧ್ಯೆ ಬಸ್‌ ಒಂದು ಅಪಘಾತಗೊಂಡಿದ್ದು.

ಗಾಯಗೊಂಡ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸುವ ಮೂಲಕ ತರೀಕೆರೆ ಶಾಸಕ ಡಿ.ಎಸ್‌.ಸುರೇಶ್‌ ಮಾನವೀಯತೆ ಮೆರೆದಿದ್ದಾರೆ. ಇನ್ನು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದ್ದು. ಬಸ್‌ ಅಪಘಾತವಾದ ಸ್ಥಳ ಅದು ಅಪಘಾತವಲಯವಾಗಿದ್ದು,

ಮುಂದಿನ ದಿನಗಳಲ್ಲಿ ಅಪಘಾತವಾಗದಂತೆ ಸಂಬಂಧ ಪಟ್ಟ ಕ್ರಮಗಳನ್ನು ಕೈಗೊಳ್ಳಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top