ಶಾಲಾ ಕಾಲೇಜು ಆರಂಭಿಸುವ ಯೋಚನೆ ಸದ್ಯಕ್ಕಿಲ್ಲ – ಸುರೇಶ್‌ ಕುಮಾರ್‌

ರಾಜ್ಯದಲ್ಲಿ ಕೊರೋನಾ ಕೇಸಸ್‌ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸದ್ಯ ಶಾಲೆ ಮತ್ತು ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಅನ್‌ಲಾಕ್‌ ೪.೦ ನಂತರ ಶಾಲೆ ಕಾಲೇಜುಗಳು ಆರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ, ಇನ್ನು ಮಾರ್ಚ್‌ನಿಂದ ಶಾಲಾ ಕಾಲೇಜುಗಳು ಬಂದ್‌ ಆಗಿದ್ದು ಸೆಪ್ಟೆಂಬರ್‌ನಲ್ಲಿ ಆರಂಭಿಸುವುದರ ಬಗ್ಗೆ ಚಿಂತನೆ ನಡೆಸಿತ್ತು, ಆದ್ರೆ ಸದ್ಯಕ್ಕೆ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ

ಈ ವಿಚಾರವಾಗಿ ಶಾಸಕರು ಮತ್ತು ಸಂಸದರು ಇತರೆ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಕೇಳಿದ್ದೇವೆ, ಇದರ ಬಗ್ಗೆ ಸಾಕಷ್ಟು ಅಭಿಪ್ರಾಯ ಸಂಗ್ರಹ ಮತ್ತು ಪೋಷಕ ಸಲಹೆಯನ್ನು ಪಡೆಯಬೇಕಿದೆ ಅಲ್ಲಿಯವರೆಗೆ ಶಾಲಾ ಕಾಲೇಜು ಪ್ರಾರಂಭಿಸುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top