16ರ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಆಸಿಡ್‌ ಹಾಕಿ ವಿಡಿಯೋ ಮಾಡಿ ಬೆದರಿಕೆ..

ಮೂರು ಜನ ಯುವಕರು ೧೬ ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬೆದರಿಕೆ ಹಾಕಿರುವ ಘಟನೆ ಪಂಜಾಬಿನ ಲುಧಿಯಾನದಲ್ಲಿ ನಡೆದಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
16 ವರ್ಷದ ಹುಡುಗಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಆಕೆಯನ್ನು ತಡೆದು ತಮ್ಮ ಬೈಕಿನಲ್ಲಿ ಬರುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಯುವತಿ ಒಪ್ಪಿರಲಿಲ್ಲ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಿ ಆಸಿಡ್‌ ಸುರಿದು ವಿಕೃತಿ ಮೆರೆದಿದ್ದಾರೆ. ನಂತರ ಯುವತಿಯನ್ನು ಯಾರು ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಇನ್ನು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಮೊದಲಿಗೆ ಹೇಳಿಕೊಳ್ಳು ಹಿಂದೇಟುಹಾಕಿದ್ದ ಯುವತಿ ನಂತರ ತನ್ನ ತಾಯಿ ಬಳಿ ನಡೆದ ಘಟನೆಯ ಕುರಿತು ಹೇಳಿಕೊಂಡಿದ್ದಾಳೆ. ನಂತರ ಹುಡುಗಿಯ ಅವಸ್ಥೆಯನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ವಿಚಾರವಾಗಿ ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಆರೋಪಿಗಳು 15 ರಿಂದ 16 ವರ್ಷದವರಾಗಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಆರೋಪಿಗಳ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top