ಎಲ್ಲರ ಅಚ್ಚು ಮೆಚ್ಚಿನ ಅಂಬಿ #RIP

 ರೆಬಲ್​ ಸ್ಟಾರ್​ ಅಂಬರೀಶ್​ ಇನ್ನಿಲ್ಲ

ಹಿರಿಯ ನಟ, ಮಾಜಿ ಸಚಿವ ಎಲ್ಲರ ಅಚ್ಚು ಮೆಚ್ಚಿನ ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ 10.20ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಇಂದು ಸಂಜೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಕೂಡಲೇ ಅವರನ್ನ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟ ಅಂಬರೀಶ್ ಅವರಿಗೆ 66 ವರ್ಷ ವಯಸ್ಸಾಗಿತ್ತು.

ಮಂಡ್ಯ ಬಸ್ ದುರಂತಕ್ಕೆ ನೊಂದು ಅಘಾತವಾಗಿ ಅಂಬಿಗೆ ಹೀಗಾಯಿತೇ.?

ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಸೇರಿದಂತೆ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬರೀಶ್​ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರು, ಸ್ಯಾಂಡಲ್ ವುಡ್ ನಟರು ಹಾಗೂ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​ ವ್ಯವಸ್ಥೆ ಕಲ್ಪಿಸಲಾಗಿದೆ. ಆಸ್ಪತ್ರೆ ಸುತ್ತ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ 1952 ಮೇ 29ರಂದು ಹುಚ್ಚೇಗೌಡ ಮತ್ತು ತಾಯಿ ಪದ್ಮಮ್ಮ ದಂಪತಿಗೆ ಅಮರನಾಥ್ ಅಂದರೆ ಅಂಬಿ​ ಜನಿಸಿದರು.

ಮಂಡ್ಯದಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಮೈಸೂರಿನಲ್ಲಿ ಅಂಬರೀಶ್​ ಪದವಿ ಪಡೆದುಕೊಂಡಿದ್ದರು. ಅಂಬರೀಶ್ ಅವರು 1991 ರಲ್ಲಿ ಕನ್ನಡದ ಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.

ಕನ್ನಡ ಸಿನಿಮಾರಂಗದಲ್ಲಿ ಜಲೀನಾಗಿ `ಏ ಬುಲ್ ಬುಲ್ ಮಾತಾಡಾಕಿಲ್ವಾ ಅಂತ’ ರೆಬೆಲ್ ಸ್ಟಾರ್ ಆಗಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇಂದು ಇಡೀ ಕನ್ನಡ ಜನತೆಗೆ ತುಂಬಲಾರದ ನಷ್ಟವಾಗಿದೆ. ನಾವೆಲ್ಲರೂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top