ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಕೋರಿದ ಪ್ರಧಾನಿ ಮೋದಿ!

kannada rajyotsava modi wishes

ಇಂದು ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಬ್ಬ ಸಂಭ್ರಮ ಮನೆಮಾಡಿದೆ ನಾಡಿನ ಸಮಸ್ತ ಜನತೆ ಕೂಡ ಕರುನಾಡ ಜನತೆಗೆ ಶುಭಾಷಯಗಳ ಮಹಾಪೂರವೆ ಹರಿದು ಬರುತ್ತಿದೆ, ಇದೇ ವೇಳೆ ದೇಶದ ಪ್ರಧಾನಿ ಕೂಡ ರಾಜ್ಯದ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಕನ್ನಡದಲ್ಲಿ ತಿಳಿಸಿದ್ದಾರೆ.

ಕನ್ನಡದಲ್ಲಿ ಮೋದಿ ಕನ್ನಡ ಜನತೆಗೆ ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ. ಎಂದು ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ರಾಷ್ಟಪತಿ ಕೋವಿಂದ್ ಕೂಡ ಶುಭಾಶಯ ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಕನ್ನಡರಾಜ್ಯೋತ್ಸವವನ್ನು ಆಚರಿಸಿ, ರಾಷ್ರ್ಟ ಧ್ವಜವನ್ನು ಹಾರಿಸಿ ಅನ್ನೋ‌ ಮೂಲಕ ಹೊಸ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಇನ್ನು ಈ ವಿಚಾರವಾಗಿ ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದ ಜನತೆಯಿಂದ ತೀವ್ರ ವಿರೋಧ ಕೂಡ ವ್ಯಕ್ತವಾಗುತ್ತಿದೆ.

kannada rajyotsava shubhashayagalu

ಕನ್ನಡ ನ್ಯೂಸ್ ಲೈವ್ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳಿ

Similar Articles

Comments
Top